ಸಾಂಸ್ಕೃತಿಕವಾಗಿ ಶ್ರೀಮಂತಿಕೆ ಮಾರ್ದನಿಸುತ್ತಿರುವ ಊರು ಕೊಡವೂರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಜ್ಯೋತಿ ಕೆ ಹೆಬ್ಬಾರ್ ಅಭಿಪ್ರಾಯ ಪಟ್ಟರು. ಶ್ರೀ ಕೊಡವೂರು ಶoಕರನಾರಾಯಣ ದೇವಸ್ಥಾನದಲ್ಲಿ ನಡೆಯುವ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಲೆ, ಸಾಹಿತ್ಯ, ಸಂಸ್ಕೃತಿ, ಆಧ್ಯಾತ್ಮದ ಅಸ್ಮಿತೆ ಯಿಂದ ಬೆಳಗುತ್ತಿರುವ ಶ್ರೀ ಶಂಕರ ನಾರಾಯಣನ ಈ ದಿವ್ಯ ಸನ್ನಿಧಿಯಲ್ಲಿ ಗುರು ರಾಘವೇಂದ್ರ ಸ್ವಾಮಿಗಳ ಆರಾಧನೆಯ ಈ ಪರ್ವ ಕಾಲದಲ್ಲಿ ಕಲಾವಿದರಿಗೆ ಹಾಗೂ ಭಕ್ತಾದಿಗಳಿಗೆ ಶುಭ ಹಾರೈಸಿದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರುರವರು ಶ್ರೀ ದೇವಳದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ಸೀತಾರಾಮ ಆಚಾರ್ಯ, ಭಕ್ತವೃಂದದ ಅಧ್ಯಕ್ಷ ತೋಟದಮನೆ ದಿವಾಕರ ಶೆಟ್ಟಿ, ನಗರಸಭಾ ಸದಸ್ಯ ವಿಜಯ ಕೊಡವೂರು, ಉದ್ಯಮಿ ಸಾಧು ಸಾಲ್ಯಾನ್, ವ್ಯವಸ್ಥಾಪನ ಸಮಿತಿ ಸದಸ್ಯ ಭಾಸ್ಕರ್ ಪಾಲನ್, ಎ. ರಾಜ ಸೇರಿಗಾರ್ ಉಪಸ್ಥಿತರಿದ್ದರು.
ಶಂಕರನಾರಾಯಣ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾರ್ದನ್ ಕೊಡವೂರು ಸ್ವಾಗತಿಸಿದರು. ಕಾವ್ಯ ಸೀತಾರಾಮ್ ಪ್ರಾರ್ಥಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು.